Latest

ಭೀಕರ ರಸ್ತೆ ಅಪಘಾತ; 14 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಟೆಂಪೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ 14 ಜನರು ಸಾವನ್ನಪ್ಪಿರುವ ಘೋರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ವೆಲ್ದುರ್ಥಿ ಬಳಿಯ ಮಾದಾಪುರಂ ಬಳಿ ಈ ದುರಂತ ಸಂಭವಿಸಿದ್ದು, 8 ಮಹಿಳೆಯರು, 5 ಪುರುಷರು, ಮಕ್ಕಳು ಸೇರಿದಂತೆ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ರಾಜಸ್ಥಾನದ ಅಜ್ಮಿರ್ ಗೆ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Home add -Advt

Related Articles

Back to top button