Kannada NewsLatest

ಎರಡು ದಿನದಲ್ಲಿ ಜಾರಕಿಹೊಳಿ ಬ್ರದರ್ಸ್ ಜಂಟಿ ಸುದ್ದಿಗೋಷ್ಠಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಗೋಕಾಕ್ ಗೆ ಆಗಮಿಸಲಿದ್ದಾರೆ. ರಮೇಶ್ ಬಂದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಮಾಹಿತಿ ನೀಡುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್ ನಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಎರಡು ದಿನದಲ್ಲಿ ರಮೇಶ್ ಹಾಗೂ ನಾನು ಜಂಟಿ ಸುದ್ದಿಗೋಷ್ಠಿ ನಡೆಸಿ ಕೆಲವೊಂದು ವಿಚಾರದ ಬಗ್ಗೆ ನಿರ್ಧಾರ ಪ್ರಕಟಿಸುತ್ತೇವೆ ಎಂದರು.

ಇನ್ನು ಮಾಧ್ಯಮಗಳಲ್ಲಿ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಒತ್ತಡ ಹೇರಲಾಗುತ್ತಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದೆ. ಇಂತಹ ಸುದ್ದಿ ಯಾಕೆ ಹರಡುತ್ತಿದೆ ಗೊತ್ತಿಲ್ಲ. ನನಗೆ ಸಚಿವ ಸ್ಥಾನ ನೀಡುವಂತೆ ನಾನು ಕೇಳಿಲ್ಲ. ನನಗೆ ಯಾರೂ ಕೂಡ ಸಚಿವ ಸ್ಥಾನದ ಆಫರ್ ಮಾಡಿಲ್ಲ. ರಾಜಕೀಯದಲ್ಲಿ ಅಸಮಾಧಾನ, ಬೇಜಾರು ಇದ್ದೇ ಇರುತ್ತೆ. ರಮೇಶ್ ಮತ್ತೆ ಸಚಿವರಾಗಬೇಕು ಎಂಬುದು ನಮ್ಮೆಲ್ಲರ ಆಸೆ. ಪಕ್ಷದಲ್ಲಿರುವ ಕೆಲವರು ಬೆನ್ನಿಗೆ ಚೂರಿ ಹಾಕಿದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಲಖನ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದಲ್ಲಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button