Kannada NewsKarnataka NewsLatest

ರಹಸ್ಯ ಸಭೆಗೆ ತಿರುಗೇಟು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸಭೆ ಬಗ್ಗೆ ತಿರುಗೇಟು ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಉದ್ದೇಶಪೂರ್ವಕವಾಗಿ ಯಾರನ್ನು ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ ಇರಲಿಲ್ಲ. ಇದು ಅಧಿಕೃತ ಸಭೆಯೂ ಅಲ್ಲ ಎಂದು ಟಾಂಗ್ ನೀಡಿದ್ದಾರೆ.

ಯಾರನ್ನೋ ಹೊರಗಿಟ್ಟು ಸಭೆ ನಡೆಸಲಾಗಿದೆ ಎಂಬ ವಿಷಯ ಮಾಧ್ಯಮಗಳ ಮೂಲಕ ತಿಳಿಯಿತು. ಉದ್ದೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ ಇರಲಿಲ್ಲ. ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಭೆ ಅಧಿಕೃತ ಸಭೆಯಲ್ಲ, ಹೀಗಾಗಿ ಸಭೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿಲ್ಲ ಎಂದಿದ್ದಾರೆ.

Home add -Advt

ಜಿಲ್ಲೆಯಲ್ಲಿ ಯಾರು? ಎಷ್ಟು ? ಪಕ್ಷಕ್ಕಾಗಿ ದುಡಿಯುತ್ತಾರೆ ಎಂಬುದು ಪಕ್ಷದ ವರಿಷ್ಠರಿಗೆ ಚನ್ನಾಗಿ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತಾ ಹೋದರೆ ಅದಕ್ಕೆಲ್ಲ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. 2008ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಬಲವರ್ಧನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಎಲ್ಲಾ ವಿದ್ಯಮಾನಗಳನ್ನು ವರಿಷ್ಠರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?

Related Articles

Back to top button