
ಪ್ರಗತಿವಾಹಿನಿ ಸುದ್ದಿ: ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲಮಂಜುನಾಥ ಸ್ವಾಮೀಜಿ ಹಾಗೂ ಅವರ ಆಪ್ತ ಸಹಾಯಕ ಅಭಿಲಾಷ್ ನನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ಮಠದಲ್ಲಿ ತಡರಾತ್ರಿ ದಾಳಿ ನಡೆಸಿದ ಪೊಲಿಸರು ಸ್ವಾಮೀಜಿ ಹಾಗೂ ಅವರ ಆಪ್ತ ಸಹಾಯಕನನ್ನು ಬಂಧಿಸಿದ್ದಾರೆ. ಬಾಲಮಂಜುನಾಥ್ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.
ಕಳೆದ ಫೆಬ್ರವರಿಯಲ್ಲಿ ತುಮಕೂರು ಸೈಬರ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಸ್ವಾಮೀಜಿಯ ಮತ್ತೊಂದು ಮುಖವಾಡ ಬಯಲಾಗಿದೆ.
ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸ್ವಾಮೀಜಿ ಹಾಗೂ ಅವರ ಆಪ್ತ ಸಹಾಯಕನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ