Kannada NewsKarnataka NewsLatest

ಆರೋಗ್ಯ ಮತ್ತು ಆರ್ಥಿಕತೆಯ ಸಮತೂಕದ ಬಜೆಟ್ – ಡಾ.ಸೋನಾಲಿ ಸರ್ನೋಬತ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರ ಸರಕಾರದ ಸೋಮವಾರ ಮಂಡಿಸಿರುವ ಮೊದಲ ಡಿಜಿಟಲ್ ಬಜೆಟ್ ಆತ್ಮನಿರ್ಭರ ಮತ್ತು ಆಯುಷ್ಮಾನ್ ಭಾರತ್ ಕೇಂದ್ರೀಕೃತ ಬಜೆಟ್ ಆಗಿದ್ದು, ಭಾರತವನ್ನು ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ ಎಂದು ಲಲಿತಕಲಾ ಅಕಾಡೆಮಿ ಸದಸ್ಯರೂ, ಕರ್ನಾಟರ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರೂ ಆಗಿರುವ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್  ದೇಶದ ಆರ್ಥಿಕತೆಗೆ ಶಕ್ತಿ ತುಂಬುವುದಲ್ಲದೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ದೇಶದ ಸದೃಢ ಬೆಳವಣಿಗೆಗೂ ಕಾರಣವಾಗಲಿದೆ ಎಂದು ಅವರು ಹೇಳಿದ್ದಾರೆ.

ರೈತರ ಕಲ್ಯಾಣಕ್ಕಾಗಿ  ಹಲವು ಯೋಜನೆ ಜಾರಿಗೊಳಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಬದಲಾವಣೆ ಮಾಡಲಾಗಿದೆ. ಒಟ್ಟು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಬೆಲೆ ಖಾತರಿ ನೀಡಲಾಗಿದೆ. 2022ರ ಹಣಕಾಸು ವರ್ಷದಲ್ಲಿ 16.5 ಲಕ್ಷ ಕೋಟಿ ಕೃಷಿ ಸಾಲ ಗುರಿ ಹೊಂದಲಾಗಿದೆ. ಗ್ರಾಮೀಣ ಮೂಲಸೌಕರ್ಯ ಮತ್ತು ನೀರಾವರಿಗೆ ಹೆಚ್ಚುವರಿ ಹಂಚಿಕೆ ಮಾಡಲಾಗಿದೆ. ಸರ್ವ ರೀತಿಯಿಂದಲೂ ಈ ಬಜೆಟ್ ಭಾರತವನ್ನು ಸಶಕ್ತವಾಗಿಸಲಿದೆ ಎಂದು ಡಾ.ಸೋನಾಲಿ ಹೇಳಿದ್ದಾರೆ.

ಆರ್ಥಿಕತೆಗೆ ಚೈತನ್ಯ ತುಂಬಲು  ಆತ್ಮನಿರ್ಭರ ಪ್ಯಾಕೇಜ್,    ಕೊರೋನಾ ಮಹಾಮಾರಿ  ನಿರ್ಮೂಲನೆಗಾಗಿ 35 ಸಾವಿರ ಕೋಟಿ ರೂ. ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.  ಗ್ರಾಮೀಣ ಮೂಲಸೌಕರ್ಯಕ್ಕೆ 40 ಸಾವಿರ ಕೋಟಿ ರೂ. ನಿಗದಿಪಡಿಸಲಾಗಿದ್ದು, ಕೃಷಿಕರ ಸಾಲಕ್ಕಾಗಿ 16,500 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ.  ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿ,  5 ಟ್ರಿಲಿಯನ್ ಆರ್ಥಿಕತೆಯ ಗುರಿ, ರೈತರ ಆದಾಯ ದ್ವಿಗುಣಗೊಳಿಸಲು ಆದ್ಯತೆ ಮೊದಲಾದ ಯೋಜನೆಗಳು ಸರ್ವ ನಾಗರಿಕರಿಗೂ ಪ್ರಯೋಜನ ನೀಡಲಿದೆ ಎಂದು ಅವರು ಹೇಳಿದ್ದಾರೆ.

Dr. Sonali Sarnobat’s New book “Diet and Me” Released

.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button