ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಅಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಇಂದು ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸಮಯ್ಯ ಮೃತ ಬಾಣಂತಿ. ಸಮಯ್ಯ ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಡಯಾಲಿಸಿಸ್ ಮಾಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ನ.10ರಂದು ಬಿಮ್ಸ್ ಆಸ್ಪತ್ರೆಯಲ್ಲಿ 7 ಬಾಣಂತಿಯರ ಹೆರಿಗೆಯಾಗಿತ್ತು. ಅವರಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಇಂದು ಐದನೇ ಸಾವು ಸಂಭವಿಸಿದೆ.
ಬಾಣಂತಿಯರಿಗೆ ನೀಡಲಾಗಿದ್ದ ಗ್ಲುಕೋಸ್ ನಿಂದಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಳ್ಳಾರಿ ಬಿಮ್ಸ್ ನಲ್ಲಿ ಸಾವನ್ನಪ್ಪಿದ್ದ ನಾಲ್ವರು ಬಾಣಂತಿಯರ ಸಾವಿಗೆ ಐವಿ ದ್ರಾವಣವೇ ಕಾರಣ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಎಲ್ಲಾ ಆಸ್ಪತ್ರೆಗಳಲ್ಲೂ ಐವಿ ಫ್ಲೂಯಿಡ್ ಸ್ಥಗಿಇತಗೊಳಿಸಲಾಗಿದೆ. ಇದೀಗ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜೀವಗಳಿಗೆ ಬೆಲೆಯೇ ಇಲ್ಲವೇ? ಎನ್ನುವಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ