*ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಜೀವಕ್ಕೆ ಬೆಲೆಯಿಲ್ಲವೇ…?*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಅಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಇಂದು ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸಮಯ್ಯ ಮೃತ ಬಾಣಂತಿ. ಸಮಯ್ಯ ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಡಯಾಲಿಸಿಸ್ ಮಾಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನ.10ರಂದು ಬಿಮ್ಸ್ ಆಸ್ಪತ್ರೆಯಲ್ಲಿ 7 ಬಾಣಂತಿಯರ ಹೆರಿಗೆಯಾಗಿತ್ತು. ಅವರಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಇಂದು ಐದನೇ ಸಾವು ಸಂಭವಿಸಿದೆ. ಬಾಣಂತಿಯರಿಗೆ … Continue reading *ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಜೀವಕ್ಕೆ ಬೆಲೆಯಿಲ್ಲವೇ…?*