Film & EntertainmentKarnataka NewsLatest

*ಮನೆಗಳ್ಳತನ ಪ್ರಕರಣ: ಖ್ಯಾತ ನಿರ್ಮಾಪಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿಡ್ನ್ಯಾಪ್ ಮಾಡಿ ಸಿಕ್ಕಿ ಬಿದ್ದಿದ್ದ ಖ್ಯಾತ ನಿರ್ಮಾಪಕ ಈಗ ಮನೆಗಳ್ಳತನ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಘಟನೆ ನಡೆದಿದೆ.

ಹರ್ಷವರ್ಧನ್ ಬಂಧಿತ ನಿರ್ಮಾಪಕ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್ ನನ್ನು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಬಂಧಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಕುಂಬಾರಕುಳಿ ಎಂಬಲ್ಲಿ 2017ರಲ್ಲಿ ಹರ್ಷವರ್ಧನ್ ಮನೆ ಬಾಗಿಲು ಒಡೆದು ಚಿನ್ನಾಭರಣ ದೋಚಿದ್ದ. ಆತನ ವಿರುದ್ಧ ಪ್ರಕರಣ ದಾಖಲಾಗಿ ಬಂಧನಕ್ಕೀಡಾಗಿದ್ದ. ಬಳಿಕ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಆದರೆ ಕೋರ್ಟ್ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಿರಲಿಲ್ಲ. 10 ಬಾರಿ ವಾರೆಂಟ್ ಜಾರಿ ಮಾಡಿದರೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಜಾರಿ ಮಾಡಲಾಗಿತ್ತು.

ಇದೀಗ ಹರ್ಷವರ್ಧನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಷವರ್ಧನ್ ನಿನ್ನಲ್ಲೇನೋ ಹೇಳಬೇಕು ಎಂಬ ಸಿನಿಮಾ ನಿರ್ಮಾಣ ಮಾಡಿದ್ದ.

Home add -Advt

Related Articles

Back to top button