
ನೂತನ ಐಜಿಪಿ, ಎಸ್ ಪಿ ನೇಮಕ
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಧಿಕಾರಿಯ ವರ್ಗಾವಣೆಯಾಗಿದೆ.
ಬಳ್ಳಾರಿಯ ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ತಿಕಾ ಕಟಿಯಾರ್ ಅವರನ್ನು ಸಿವಿಲ್ ರೈಟ್ಸ್ ಹಾಗೂ ಎನ್ ಫೋರ್ಸ್ ಮೆಂಟ್ ಡಿಪಾರ್ಟ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಎಸ್ ಪಿಯಾಗಿ ಸುಮನಾ ಡಿ ಪನ್ನೇಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸುಮನಾ ಡಿ ಪನ್ನೇಕರ್ ಗುಪ್ತಚರ ವಿಭಾಗದಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.




