Kannada NewsKarnataka NewsLatest
*ಜಮೀನಿಗೆ ಹೋಗಿದ್ದಾಗ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಜಮೀನಿನ ಬಳಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘೋರ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿತ್ತು. ಈ ವೇಳೆ ಮಕ್ಕಳು ಕೂಡ ಜಮೀನಿಗೆ ಹೋಗಿದ್ದರು. ಕೃಷಿ ಹೊಂಡದ ಬಳಿ ಬಂದಿದ್ದ ಬಾಲಕರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಮಹಾಂಕಾಳಿ (12) ಹಾಗೂ ಶಿವರಾಜ್ (9) ಮೃತ ಮಕ್ಕಳು. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



