Kannada NewsKarnataka NewsLatest

*ಬಳ್ಳಾರಿ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ, ಘರ್ಷಣೆಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಸಾವನ್ನಪ್ಪಿದ್ದಾರೆ. ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಗುಂಡೆತು ತಗುಲಿ ಮೃತಪಟ್ಟಿದ್ದಾರೆ. ಬುಲೆಟ್ ಮೂಲದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ಯಾರ ಗನ್ ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು ಎಂದರು.

ಅದು ಬಿಜೆಪಿ ಅವರ ಗನ್ ನಿಂದ ಬಂದಿದೆಯಾ? ಕಾಂಗ್ರೆಸ್ ನವರ ಗನ್ ನಿಂದ ಬಂದಿದೆಯಾ? ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ನಿಟ್ಟಿನಲ್ಲಿ ತನಿಖೆಗೆ ಸೂಚಿಸಲಾಗಿದೆ ಎಂದರು. ಬಳ್ಳಾರಿ ಎಸ್ ಪಿ ಖಾಸಗಿ ಬುಲೆಟ್ ಎಂದು ಹೇಳಿದ್ದಾರೆ. ಬುಲೆಟ್ ಹಾಗೂ ಗನ್ ಮೂಲದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

Related Articles

Back to top button