Kannada NewsKarnataka NewsLatest
*ಗಲಾಟೆ-ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ಬಲಿ: ಇಬ್ಬರು ಗನ್ ಮ್ಯಾನ್ ಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ಗಲಾಟೆ ನಡೆದು ಘರ್ಷಣೆಯಲ್ಲಿ ಫೈರಿಂಗ್ ನಡೆದಿದ್ದು, ಈ ವೇಳೆ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಬ್ರೂಸ್ ಠಾಣೆ ಪೊಲೀಸರು ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳು.
ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಡೆಸಿದ ಗನ್ ಫೈರ್ ನಿಂದಲೇ ರಾಜಶೇಖರ್ ಬಲಿಯಾಗಿದ್ದಾನೆ ಎಂದು ಹೇಳಲಾಗುತ್ತಿತ್ತು. ಇದೀಗ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿರುವುದು ಕುತೂಹಲ ಮೂಡಿಸಿದೆ.


