Kannada NewsKarnataka NewsLatest

*ಬಳ್ಳಾರಿ ಗಲಾಟೆ-ಫೈರಿಂಗ್ ಕೇಸ್: ಸಿಐಡಿಯಿಂದ ಇಬ್ಬರು ಗನ್ ಮ್ಯಾನ್ ಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಇಬ್ಬರು ಗನ್ ಮ್ಯಾನ್ ಗಳನು ಬಂಧಿಸಿದ್ದಾರೆ.

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಬಲಿಯಾಗಿದ್ದರು. ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಫೈರಿಂಗ್ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಇಬ್ಬರು ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಗುರುಚರಣ ಸಿಂಗ್, ಬಲ್ಚಿತ್ ಸಿಂಗ್ ಬಂಧಿತ ಗನ್ ಮ್ಯಾನ್ ಗಳು.

ಜನವರಿ ೧ರಂದು ವಾಲ್ಮೀಕಿ ಮೂರ್ತಿ ಅನಾವರಣ ಕಾರ್ಯಕ್ರಮದ ವಿಚಾರವಾಗಿ ಬ್ಯಾಅನರ್ ಕಟ್ಟುವ ವಿಚಾರಕ್ಕೆ ಎರಡು ಗುಂಔಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಫೈರಿಂಗ್ ನಲ್ಲಿ ಅಂತ್ಯವಾಗಿತ್ತು. ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಗುಂಡೇಟಿಗೆ ಬಲಿಯಾಗಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button