Kannada NewsKarnataka NewsLatest

*ಜನಾರ್ಧನ ರೆಡ್ಡಿ ಮನೆಯ ಮುಂದೆ ಮತ್ತೊಂದು ಬುಲೆಟ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಶಾಸಕ ಜನಾರ್ಧನ ರೆಡ್ಡಿ ಮನೆಯ ಬಳಿ ಮತ್ತೊಂದು ಗುಂಡು ಪತ್ತೆಯಾಗಿದೆ.

ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಇಂದು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿತ್ತು. ಈ ವೇಳೆ ಮತ್ತೊಂದು ಬುಲೆಟ್ ಪತ್ತೆಯಾಗಿದೆ. 9 ಎಂಎಂ ಬುಲೆಟ್ ಇದಾಗಿದ್ದು, ಬುಲೆಟ್ ನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ರೆಡ್ಡಿ ಮನೆಯ ಮುಂಭಾಗವೇ ಈ ಬುಲೆಟ್ ಪತ್ತೆಯಾಗಿದೆ. ಒಟ್ಟಾರೆ ಈವರೆಗೆ 5ಬುಲೆಟ್ ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಬುಲೆಟ್ ವಶಕ್ಕೆ ಪಡೆದು ಎಫ್ ಎಸ್ ಎಲ್ ಗೆ ರವಾನಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button