Kannada NewsKarnataka NewsLatest

*ಸರ್ಕಾರಿ ಆಸ್ಪತ್ರೆಯಲ್ಲಿ ಅಶ್ಲೀಲ ಹಾಡಿಗೆ ಆರೋಗ್ಯ ಅಧಿಕಾರಿಗಳಿಂದ ಭರ್ಜರಿ ಡ್ಯಾನ್ಸ್: ರೋಗಿಗಳ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳೇ ಡಾನ್ಸ್ ಮಾಡಿ ಕುಣಿದು ಕುಪ್ಪಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬಳ್ಳಾರಿ ಜಿಲ್ಲೆಯ ಚಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಈ ಘಟನೆವ್ ನಡೆದಿದೆ. ಆರೋಗ್ಯಾಧಿಕಾರಿಗಳು ಆಸ್ಪತ್ರೆಯಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ವೈದ್ಯಾಧಿಕಾರಿಗಳ ವರ್ತನೆಗೆ ರೋಗಿಗಳು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣದ ಬಳಿಕ ಆಸ್ಪತ್ರೆಯಲ್ಲಿ ವೈದ್ಯರು ಡಾನ್ಸ್ ಮಾಡಿ ಮೋಜು-ಮಸ್ತಿಯಲ್ಲಿ ತೊಡಗಿದ್ದರು. ಈ ವಿಡುಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಂದು ಆಸ್ಪತ್ರೆಯ ಆವರಣದಲ್ಲಿ ಮಹಾತ್ಮಾಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳ ಎದುರಲ್ಲೇ ವೈದ್ಯರು ಹಾಗೂ ಸಿಬ್ಬಂದಿಗಳು ತೆಲುಗು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.

ಅಸಭ್ಯ ಸಾಹಿತ್ಯವಿರುವ ಹಾಡಿಗೆ ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳು ಕುಣಿದು ಕುಪ್ಪಳಿಸಿದ್ದಾರೆ. ಆರೋಗ್ಯ ಸುರಕ್ಷಣಾಧಿಕಾರಿ ಬಿ.ಕವಿತಾ ಹಾಗೂ ಆರೋಗ್ಯಾಧಿಕಾರಿ ಉಲಿಗೇಶ್ ಅವರು ಡಾನ್ಸ್ ಮಾಡುತ್ತಿರುವ ದೃಶ್ಯ ಭಾರಿ ವೈರಲ್ ಆಗಿದೆ. ವೈದ್ಯಾಧಿಕಾರಿಗಳೇ ಆಸ್ಪತ್ರೆಯಲ್ಲಿ ಡಾನ್ಸ್ ಮಾಡಿ ಕುಣಿದು ಕುಪ್ಪಳಿಸುತ್ತಿದ್ದರೆ ರೋಗಿಗಳ ಗತಿಯೇನು ಎಂಬುದು ಸಾರ್ವಜನಿಕರ ಪ್ರಶ್ನೆ.

ಅಲ್ಲದೇ ಆಸ್ಪತ್ರೆಯಲ್ಲಿ ಅಶ್ಲೀಲ ಹಾಡಿಗೆ ಡಾನ್ಸ್ ಮಾಡಿ ಬೇಜವಾಬ್ದಾರಿ ಮೆರೆದ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button