CrimeKarnataka NewsLatest

*ಹಾಸ್ಟೆಲ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲ್ಲೆ: ಓರ್ವ ಬಾಲಕ ಸಾವು; 7 ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ ವಾರ್ಡನ್, ಬಾಲಕರ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಮನಬಂದಂತೆ ಹೊಡೆದಿದ್ದು, ಓರ್ವ ಬಾಅಲಕ ಮೃತಪಟ್ಟಿದ್ದಾನೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲ್ಲೆ ಬಳಿಕ ಬಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಡ್​ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಹಲ್ಲೆ ನಡೆಸಿರುವ ವಿದ್ಯಾರ್ಥಿ ಡ್ರಗ್​ ಅಡಿಕ್ಟ್ ಆಗಿರುವ ಶಂಕೆ ಇದ್ದು, ಇಷ್ಟೆಲ್ಲ ಹುಡುಗರ ಮೇಲೆ ಆತ ಒಬ್ಬನೇ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.

ಈ ಹಿಂದೆ ಹಾಸ್ಟೆಲ್​​ನಲ್ಲಿ ಈ ರೀತಿಯ ಯಾವುದೇ ಘಟನೆ ನಡೆದಿರಲಿಲ್ಲ. ಹಲ್ಲೆ ನಡೆದಿರೋದು ಕೇವಲ ಒಬ್ಬರ ಮೇಲಲ್ಲ. ಹಲವರ ಮೇಲೆ ಬಾಲಕ ಹಲ್ಲೆ ನಡೆಸಿದ್ದಾನೆ. ಹೀಗಾಗಿ ಆತನಿಗೆ ಏನಾದರೂ ಮಾನಸಿಕ ಸಮಸ್ಯೆಗಳಿತ್ತಾ? ಅಥವಾ ಆತ ಮಾದಕ ವಸ್ತುಗಳಿಗೆ ಎಡಿಕ್ಟ್​​ ಆಗಿದ್ದನಾ? ಎನ್ನುವ ಬಗ್ಗೆಯೂಅನುಮಾನಗಳು ವ್ಯಕ್ತವಾಗಿವೆ. ಹಾಸ್ಟೆಲ್​​ ಆಡಳಿತ ಮಂಡಳಿ ನಂಬಿ ಮಕ್ಕಳನ್ನು ಬಿಟ್ಟಿದ್ದೇವೆ. ಆದರೆ ಅವರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಅಸಲಿಗೆ ಬಾಲಕರ ನಡುವೆ ಏನಾಗಿದೆ ಎನ್ನುವುದೇ ಗೊತ್ತಿಲ್ಲ ಎಂದು ಮೃತ ಬಾಲಕನ ಪೋಷಕರು ಕಣ್ಣೀರಿಟ್ಟಿದ್ದಾರೆ.

Home add -Advt


Related Articles

Back to top button