ಪ್ರಗತಿವಾಹಿನಿ ಸುದ್ದಿ: ಖ್ಯಾತ ಮಕ್ಕಳ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಸುನೀಲ್ ಅಪಹರಣಕ್ಕೊಳಗಾದವರು.
ಬೆಳಿಗ್ಗೆ ದೇವಸ್ಥಾನದ ಬಳಿ ವಾಕಿಂಗ್ ಮಾಡುತ್ತಿದ್ದ ಡಾ.ಸುನೀಲ್ ಅವರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದಾರೆ. ಬಳಿಕ 6 ಕೋಇ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ.
ಕಿಡ್ನ್ಯಾಪ್ ಪ್ರಕರಣದ ಹಿಂದೆ ಸಹೋದರನ ವ್ಯವಹಾರದ ಲಿಂಕ್ ಇರುವ ಶಂಕೆ ವ್ಯಕ್ತವಾಗಿದೆ. ಡಾ.ಸುನೀಲ್ ಸಹೋದರ ವೇಣು ಮದ್ಯದ ವ್ಯಾಪಾರಿ ಅಲ್ಲದೇ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ. ಈ ಹಿನ್ನೆಲೆಯಲ್ಲಿ ಅಪಹರಣ ಪ್ರಕರನ ಸಾಕಷ್ಟು ಅನುಮಾನ ಮೂಡಿಸಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ