Kannada NewsKarnataka NewsLatest

*ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಾಲೇಜು ಉಪನ್ಯಾಸಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಬಳ್ಳಾರಿಯಲ್ಲಿ ಈ ಘಟನೆ ನಡೆದಿದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ಕಾಮುಕ ಉಪನ್ಯಾಸಕ ವಿದ್ಯಾರ್ಥಿನಿಯನ್ನು ತನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದು, ಸದ್ಯ ಆರೋಪಿ ಉಪನ್ಯಾಸಕನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Home add -Advt

ಬಳ್ಳಾರಿ ನಗರದ ಖಾಸಗಿ ಕಾಲೇಜೊಂದರ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿ. ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

2025 ರಲ್ಲಿ ಉಪನ್ಯಾಸಕ ರವಿಕಿರಣ್ ಹಾಗೂ ವಿದ್ಯಾರ್ಥಿನಿ ನಡುವೆ ಪರಿಚಯವಾಗಿ ಸ್ನೇಹ ಬೆಳೆದಿದೆ. ಇಬ್ಬರ ನಡುವೆ ಸಲುಗೆ ಬೆಳೆಯುತ್ತಿದ್ದಂತೆ ವಿದ್ಯಾರ್ಥಿನಿಯ ಹೆತ್ತವರು ಇಬ್ಬರನ್ನು ಕರೆದು ಬುದ್ಧಿ ಹೇಳಿದ್ದರು. ಈ ವೇಳೆ ಉಪನ್ಯಾಸಕ ತಾನು ಯುವತಿಯನ್ನು ವಿವಾಹವಾಗುವುದಾಗಿ ಹೇಳಿದ್ದಾನೆ. ಅಲ್ಲದೇ ಆಕೆಗೆ ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ನಂಬಿಸಿ ಪದೇಪದೇ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದಾನೆ.

ಸಂತ್ರಸ್ತೆ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾಮುಕ ಉಪನ್ಯಾಸಕನ್ನು ಬಂಧಿಸಿದ್ದಾರೆ.

Related Articles

Back to top button