Karnataka NewsLatestPolitics

*ಬಿಜೆಪಿ ಅವಧಿಯಲ್ಲಿಯೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೇಟ್ ಪೇಫರ್ ಅಥವಾ ಮತಪತ್ರ ಬಳಕೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ರಿಕ್ರಿಯೆ ನೀಡಿದ್ದಾರೆ. ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇನೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಈ ವಿಚಾರವಾಗಿ ಕಾನೂನು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ” ಎಂದು ತಿಳಿಸಿದರು.

ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೆಂಟ್ ಮೇರಿಸ್ ಹೆಸರಿಡಬೇಕು ಎಂಬ ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಮೆಟ್ರೋ ನಿಲ್ದಾಣಗಳಿಗೆ ಹೆಸರಿಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಈ ವಿಚಾರವಾಗಿ ನಾವು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

Home add -Advt

ಗೃಹಸಚಿವ ಪರಮೇಶ್ವರ್ ಅವರು ಎಬಿವಿಪಿ ಆಯೋಜಿಸಿದ್ದ ರಾಣಿ ಅಬ್ಬಕ್ಕ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

“ಖರ್ಗೆ ಅವರು ಹಿರಿಯ ನಾಯಕರು. ಯಾರೆಲ್ಲಾ ಹುದ್ದೆ ಹಾಗೂ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಅವರು ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಕಾರ್ಯಕರ್ತರಾಗಿ, ಪಕ್ಷದ ಪದಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡವರು ಅದಕ್ಕಾಗಿ ಸಮಯ ಮೀಸಲಿಡಬೇಕು. ಈ ಹುದ್ದೆಗಳು ಹೇಳಿಕೊಳ್ಳುವುದಕ್ಕೆ ಪಡೆಯುವಂತಹದ್ದಲ್ಲ. ಇದು ಪಕ್ಷ ಸಂಘಟನೆಗೆ ಹಾಗೂ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ಮನವರಿಕೆ ಮಾಡಲು ನೀಡಲಾಗುವುದು” ಎಂದು ತಿಳಿಸಿದರು.

ಸಿ.ಟಿ ರವಿ ಭಾಷೆ, ಅವರ ಸಂಸ್ಕೃತಿ ತೋರುತ್ತದೆ

ಮದ್ದೂರಿನಲ್ಲಿ ದ್ವೇಷ ಭಾಷಣ ಹಿನ್ನೆಲ್ಲೆಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಹೆಚ್ಚು ಮಾಹಿತಿ ಇಲ್ಲ. ಅವರು ಮಾತು, ಭಾಷೆ, ನಡತೆಯೇ ಅವರ ಪದ್ಧತಿ, ಸಂಸ್ಕೃತಿಯನ್ನು ತೋರುತ್ತದೆ” ಎಂದು ತಿಳಿಸಿದ್ದಾರೆ.

It was BJP government which made the law allowing ballot paper in elections: DCM DK Shivakumar

Bengaluru, Sep 11: Hitting out at the BJP for opposing use of ballot paper in local body elections, Deputy Chief Minister DK Shivakumar today said it was the BJP government which made the provision in the law.

Speaking to reporters at Vidhana Soudha, he said, “The BJP brought in the law to allow use of ballot papers in the local body elections. The Election Commission laws also allow use of ballot papers. There is nothing unlawful or wrong in using ballot papers for local body elections. The Law Minister will submit a proposal regarding this.”

Asked about BJP expressing opposition to CM’s proposal to name Shivajinagara metro station after Saint Mary, he said, “There is nothing wrong in proposing names for metro stations. We will discuss and take a call.”

Replying to a question on Home minister Parameshwara participating in an ABVP programme, he said he wasn’t aware of it.

“Kharge is a senior leader and he has said that everyone has to work honestly for the party based on the roles assigned. These roles are not for flaunting but for party organisation,” he said.

C T Ravi’s language shows his culture
Asked about an FIR being filed against BJP leader C T Ravi for making inciteful speech in Madduru, he said, “I don’t have much info about it. His words and behaviour demonstrate his culture.”

Related Articles

Back to top button