ಎಸ್ಪಿ ಲಕ್ಷ್ಮಣ ನಿಂಬರಗಿ ವಿಡಿಯೋ ಸಂದೇಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸೋಮವಾರ ವಿವಿಧ ಸಂಘಟನೆಗಳು ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಮತ್ತು ಜಿಲ್ಲಾ ಪೊಲೀಸ್ ಎಚ್ಚರಿಕೆಗಳನ್ನು ನೀಡಿವೆ.
ಪೊಲೀಸ್ ಆಯುಕ್ತ ತ್ಯಾಗರಾಜನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಪ್ರತ್ಯೇಕ ಪ್ರಕಟಣೆಗಳನ್ನು ಹೊರಡಿಸಿದ್ದಾರೆ.
ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲು ಮಾತ್ರ ಅವಕಾಶವಿದೆ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮನ ಕೈಗೊಳ್ಳಲಾಗುವುದು. ಕೋವಿಡ್ -19ರ ನಿಯಮಾವಳಿಗಳನ್ನು ಸಹ ಲಕ್ಷ್ಯದಲ್ಲಿಟ್ಟುಕೊಂಡು ಪ್ರತಿಭಟನೆ ನಡೆಸಬೇಕು ಎಂದು ಲಕ್ಷ್ಮಣ ನಿಂಬರಗಿ ಸೂಚಿಸಿದ್ದಾರೆ.
ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಹಾಗೂ ದಲಿತ ಸಂಘಟನೆಗಳು ಕರ್ನಾಟ ರಾಜ್ಯ ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸ್‌ರಿಂದ ಎಲ್ಲ ಸುರಕ್ಷತಾ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ತ್ಯಾಗರಾಜನ್ ತಿಳಿಸಿದ್ದಾರೆ.
ಕಾನೂನು ಬಾಹಿರ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಂದ್ ಹಿನ್ನೆಲೆಯಲ್ಲಿ ಸಂಘನೆಗಳು/ ಸಂಘಟಕರು ಮತ್ತು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ.
ಯಾವುದೇ ವ್ಯಾಪಾರ ವಹಿವಾಟುಗಳನ್ನು ಒತ್ತಾಯ ಪೂರ್ವಕ ಬಂದ ಮಾಡಿಸಕೂಡದು.
ಸುಗಮ ಸಂಚಾರಕ್ಕೆ ಅಡೆತಡೆಯಾಗದಂತೆ ವಿಶೇಷವಾಗಿ ಅಂಬ್ಯುಲನ್ಸ್, ಸಾರ್ವಜನಿಕ ಸಾರಿಗೆ, ಅಗ್ನಿಶಾಮಕ ವಾಹನ ಮತ್ತು ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಯಾವುದೇ ಅಡೆತಡೆ ಮಾಡತಕ್ಕದ್ದಲ್ಲ.
ಕೋವಿಡ್- ೧೯ ನೇದ್ದರ ಕುರಿತು ಸರ್ಕಾರದಿಂದ ನೀಡಲಾದ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. (ಸಾನಿಟೈಜರ್ ಬಳಕೆ, ಮಾಸ್ಕ ಧರಿಸುವುದು & ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.) ಎಂದು ಸೂಚಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಕಛೇರಿಗಳು ಕಾರ್ಯನಿರ್ವಹಿಸುವಲ್ಲಿ ಯಾವುದೇ ಅಡೆತಡೆ ಮಾಡಕೂಡದು. ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ