Latest

ಬಂಡೆಮಠದಶ್ರೀ ಆತ್ಮಹತ್ಯೆ ಕೇಸ್; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಮಾಗಡಿಯ ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣ ಪ್ರಮುಖ ಆರೋಪಿಗಳಾದ ಕಣ್ಣೂರು ಮಠದ ಮೃತ್ಯುಂಜಯಶ್ರೀ, ಮಹದೇವ್ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಮಾಗಡಿ ಪೊಲೀಸರು ರಾಮನಗರ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಲಯ ನ.15ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

Home add -Advt

ಇನ್ನು ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಬಸವಲಿಂಗಶ್ರೀಗಳ ವಿಡಿಯೋ ಮಾಡಿಟ್ಟುಕೊಂಡ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ನೀಲಾಂಬಿಕೆ ಸ್ವಾಮೀಜಿ ಜೊತೆ ಕಳೆದ ಎರಡು ವರ್ಷಗಳಿಂದ ಸಂಪರ್ಕದಲ್ಲಿದ್ದಳು.

ಎಲ್ಲಾ ವಿಡಿಯೋಗಳನ್ನು ತುಮಕೂರಿನಲ್ಲಿ ಎಡಿಟ್ ಮಾಡಲಾಗಿತ್ತು. ಸ್ವಾಮೀಜಿಯ ಮರ್ಯಾದೆ ತೆಗೆಯಬೇಕು ಎಂಬ ಕಾರಣಕ್ಕೆ ಯೋಜನೆ ರೂಪಿಸಿ ಕೃತ್ಯವೆಸಗಿದ್ದಾಗಿ ಬಾಯ್ಬಿಟ್ಟಿದ್ದಾರೆ. ಆದರೆ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದುಕೊಂಡಿರಲಿಲ್ಲ. ಅವರ ಮರ್ಯಾದೆ ಕಳೆಯುವುದಷ್ಟೇ ಉದ್ದೇಶವಾಗಿತ್ತು ಎಂದು ಆರೋಪಿಗಳು ಹೇಳಿದ್ದಾರೆ ಎನ್ನಲಾಗಿದೆ.

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ

https://pragati.taskdun.com/latest/maharastratrainfire-accidentnasik/

Related Articles

Back to top button