ಪ್ರಗತಿವಾಹಿನಿ ಸುದ್ದಿ: ಡಕಾಯಿತಿ ಗ್ಯಾಂಗ್ ಸದಸ್ಯನ ಮೇಲೆ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ, ಮಹೇಶ್ ಸೀತಾರಾಮ್ ಕಾಳೆ ಎಂಬಾತನನ್ನು ಬಂಧಿಸಿದ್ದಾರೆ.
ನಸುಕಿನ ಜಾವ ಮಹೇಶ್ ಮತ್ತು ಈತನ ಗ್ಯಾಂಗ್ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್ ಸೀತಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಳಿದವರು ಪರಾರಿಯಾಗಿದ್ದಾರೆ. ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.
ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ಮತ್ತು ಪೇದೆ ವಸಂತ ಗುಡಿಗೇರಿಗೆ ಅವರಿಗೆ ಗಾಯವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ