Belagavi NewsBelgaum NewsKarnataka News

*ದಸರಾ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು*

ಪ್ರಗತಿವಾಹಿನಿ ಸುದ್ದಿ ದಸರಾ ಹಬ್ಬದ ಹಿನ್ನೆಲೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಮಾರ್ಗದಲ್ಲಿ 4 ವಿಶೇಷ ರೈಲುಗಳು ಓಡಾಟ ನಡೆಸಲಿವೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

ಪ್ರಸಕ್ತ ವಾರಾಂತ್ಯದಲ್ಲಿ ದಸರಾ ಹಬ್ಬಕ್ಕೆ ಸಾಕಷ್ಟು ಜನ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುತ್ತಾರೆ. ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಈ ಹಿನ್ನೆಲೆ ಹೆಚ್ಚುವರಿಯಾಗಿ, ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ಯಶವಂತಪುರ – ಬೆಳಗಾವಿ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 07306 ಯಶವಂತಪುರ-ಬೆಳಗಾವಿ ಎಕ್ಸ್‌ಪ್ರೆಸ್ ವಿಶೇಷ ರೈಲು ಯಶವಂತಪುರದಿಂದ ಅಕ್ಟೋಬರ್ 10 ರಂದು ರಾತ್ರಿ 8.55 ಕ್ಕೆ ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.15 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ

ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್

ರೈಲು ಸಂಖ್ಯೆ 07307 ಬೆಳಗಾವಿ -ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಬೆಳಗಾವಿಯಿಂದ ಅಕ್ಟೋಬರ್ 11 ರಂದು ಸಂಜೆ 5:30 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 06:25 ಗಂಟೆಗೆ ಮೈಸೂರಿಗೆ ಆಗಮಿಸಲಿದೆ. ಮಾರ್ಗ ಮಧ್ಯೆ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆ ನರಸೀಪುರ ಮತ್ತು ಕೃಷ್ಣರಾಜನಗರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಹುಬ್ಬಳ್ಳಿ – ಯಶವಂತಪುರ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 07305 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 10 ರಂದು 11:30 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ಸಂಜೆ 7.40 ಕ್ಕೆ ಯಶವಂತಪುರಕ್ಕೆ ತಲುಪಲಿದೆ. ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಮೈಸೂರು ಹುಬ್ಬಳ್ಳಿ ಎಕ್ಸ್‌ಪ್ರೆಸ್‌

ರೈಲು ಸಂಖ್ಯೆ 07308 ಮೈಸೂರು – ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 12 ರಂದು ರಾತ್ರಿ 10.30 ಗಂಟೆಗೆ ಮೈಸೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7:00 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿ ತಲುಪಲಿದೆ. ಮಾರ್ಗ ಮಧ್ಯೆ ಕೃಷ್ಣರಾಜನಗರ, ಹೊಳೆ ನರಸೀಪುರ, ಹಾಸನ, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು ಮತ್ತು ಹಾವೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button