
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೋಟೆಲ್ ಒಂದರಲ್ಲಿ ದುರಂತ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮಹಾಲಿಂಗೇಶ್ ಲೇಔಟ್ ನಲ್ಲಿರುವ ಪೋಲಮಸ್ ಹೋಟೆಲ್ ನಲ್ಲಿ ಈ ದುರಂತ ಸಂಭವಿಸಿದೆ. ಸಿಲಿಂಡರ್ ಸ್ಫೋಟಕ್ಕೆ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಅಗ್ನಿಶಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ