ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದ 2.5 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಚಿನ್ನ ಸಾಗಾಣೆ ವೇಳೆ ಸೀಜ್ ಮಾಡಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಕಾರ್ಗೋ ವಿಭಾಗದ ಗೋದಾಮಿನಲ್ಲಿ ಇರಿಸಲಾಗಿತ್ತು. ಆದರೆ ಇದೀಗ 2.5 ಕೆ.ಜಿ ಚಿನ್ನ ಕಳುವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು, 5 ಜನ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
2012ರ ಜೂನ್ ನಿಂದ ಡಿಸೆಂಬರ್ 2014ರವರೆಗೆ ಬೆಂಗಳೂರಿನ ಏರ್ಪೋರ್ಟ್ನಲ್ಲಿ ಪ್ರಯಾಣಿಕರಿಂದ ಜಪ್ತಿ ಮಾಡಲಾಗಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಎಂಹೆಚ್ಬಿ ಗೋಡಾನ್ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಆದರೆ ಇದೀಗ ಚಿನ್ನ ಕಳುವಾಗಿದೆ. ಆಂತರಿಕ ತನಿಖೆ ಕೈಗೊಂಡಿದ್ದ ಕಸ್ಟಮ್ಸ್ ಇಲಾಖೆಯ ವಿಜಿಲೇನ್ಸ್ ಅಧಿಕಾರಿಗಳು ತನಿಖೆ ವೇಳೆ 13 ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ 2 ಕೆಜಿ 594 ಗ್ರಾಂ. ಚಿನ್ನ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ