Latest
*ಐತಿಹಾಸಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಆರಂಭವಾಗಿದ್ದು, ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ
ದೇವಸ್ಥಾನದ ಮುಂದೆ ಹಚ್ಚಲಾಗಿದ್ದ ಕರ್ಪೂರದ ಬೆಂಕಿ ತಗುಲಿ ದ್ವಿಚಕ್ರವಾಹನಗಳು ಬೆಂಕಿಗಾಹುತಿಯಾಗಿವೆ. ವಾಹನಗಳನ್ನು ತೆರವುಗೊಳಿಸುವಂತೆ ಮೈಕ್ ನಲ್ಲಿ ಘೋಷಿಸಲಾಗಿದ್ದರೂ ಭಕ್ತರು ವಾಹನಗಳನ್ನು ತೆರವುಗೊಳಿಸಿಲ್ಲ. ಇದರಿಂದಾಗಿ ಬೆಂಕಿ ಸುತ್ತಮುತ್ತಲೂ ವ್ಯಾಪಿಸಿದೆ ಎನ್ನಲಾಗಿದೆ.
ದೇವಸ್ಥಾನದ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.




