ಐತಿಹಾಸಿಕ ಬೆಂಗಳೂರು ಕರಗಕ್ಕೆ ಬ್ರೇಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ದೇಶಾದ್ಯಂತ ಲಾಕ್ ಡೌನ್ ಕೂಡ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಐತಿಹಾಸಿಕ ಬೆಂಗಳೂರು ಕರಗ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಈ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸರಳವಾಗಿ ಕರಗ ಮಹೋತ್ಸವ ಆಚರಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನಾಲೆಯಾಲ್ಲಿ ಕಾರಗದ ಅಂಗವಾಗಿ ಎರಡು ದಿನಗಳ ಹಿಂದೆ ನಡೆಯುವ ಹಸಿಕರ ನಡೆದಿತ್ತು. ನಾಳೆ ಬುಧವಾರ ರತರಿ ಕರಗ ಮಹೋತ್ಸವ ನಡೆಯುವುದರಲ್ಲಿತ್ತು. ಆದರೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಲಾಕ್ ಡೌನ್ ಘೋಷಿಸಲಾಗಿದ್ದು, ಈ ನಿಟ್ಟಿನಲ್ಲಿ ಕರಗ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಆದೇಶದಂತೆ ಯಾವುದೇ ಸಭೆ, ಸಮಾರಂಭ, ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿಲ್ಲ. ಹೀಗಾಗಿ ಬೆಂಗಳೂರು ಕರಗ ಸಹ ನಡೆಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ವಿಚಾರವನ್ನು ತಿಳಿಸಿರುವ ಹೈಕೋರ್ಟ್ ಕರಗ ನಡೆಸದಂತೆ ಆದೇಶಿಸಿದೆ.

ಬೆಂಗಳೂರಿನ ಧರ್ಮರಾಯ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ನಡೆದ ಹಸಿಕರಗದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು, ಕರಗದ ಪೂಜಾರಿ, ನಾಲ್ಕು ಜನ ವೀರಕುಮಾರರು ಮಾತ್ರ ಭಾಗಿಯಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button