Kannada NewsKarnataka NewsLatestPolitics

*ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಡೆಯಲು ANPR ಕ್ಯಾಮರಾ ಅಳವಡಿಕೆ; ಸಿಎಂ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದ್ದು, ಅಪಘಾತ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ANPR-ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವ (ಆಟೋಮೇಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್) ಕ್ಯಾಮರಾಗಳನ್ನು ಅಳವಡಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಪರಿಶೀಲನೆ ನಡೆಸಿದರು.

ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ 9 ತಿಂಗಳಲ್ಲಿ 595 ಅಪಘಾತಗಳು ಸಂಭವಿಸಿದ್ದು, 158 ಜನರು ಸಾವನ್ನಪ್ಪಿದ್ದಾರೆ. ಅಪಘಾತ ತಡೆಗೆ ಸಂಚಾರಿ ವಿಭಾಗ ಪೊಲೀಸರು ಹಲವು ಕ್ರಮ ಕೈಗೊಂಡಿದ್ದು, ಎಎನ್ ಪಿ ಆರ್ ಕ್ಯಾಮರಾ ಅಳವಡಿಕೆ ಮಾಡಿದ್ದಾರೆ. ಅಲ್ಲದೇ ವಾಹನಗಳ ವೇಗ ಮಿತಿ ನಿಯಂತ್ರಿಸಲು ಸೂಚನೆ ನೀಡಿದ್ದು, ಕೆಲ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಉಮ್ಮಡಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು. ಹೈವೆಯಲ್ಲಿ ಅಪಘಾತಗಳ ತಡೆಗೆ ಎರಡು ಕಡೆ ಎಎನ್ ಪಿ ಆರ್ ಕ್ಯಾಮರಾ ಅಳವಡಿಸಲಾಗಿದ್ದು, ಸಿಎಂ ಪರಿಶೀಲನೆ ನಡೆಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button