ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ತಡೆಗಟ್ಟಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದಿನಿಂದ ಹಲವು ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಆಗಸ್ಟ್ 1ರಿಂದ ಬೈಕ್ ಸೇರಿದಂತೆ ಹಲವು ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರಕ್ಕೆ ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ನಿಯಮ ಜಾರಿ ಮಾಡಿದೆ.
ಆಟೋ, ಟ್ರ್ಯಾಕ್ಟರ್, ದ್ವಿಚಕ್ರವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಹೆದ್ದಾರಿಗಳ ಮೇಲೆ ಸಂಚಾರಕ್ಕೆ ಅರ್ಹವಲ್ಲದ ವಾಹನಗಳಿಗೂ ನಿರ್ಬಂಧ ವಿಧಿಸಲಾಗಿದೆ. ನಿಯಮ ಮೀರಿ ಹೆದ್ದಾರಿ ಮೇಲೆ ಸಂಚಾರ ಮಾಡಿದರೆ ಭಾರಿ ದಂಡ ತೆರಬೇಕಾಗುತ್ತದೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ 9 ಕಡೆಗಳಲ್ಲಿ ಚೆಕಿಂಗ್ ಇಡಲಾಗಿದ್ದು, ಹೆದ್ದರಿಯ ಎಂಟ್ರಿ ಹಾಗೂ ಎಕ್ಸಿಟ್ ಪಾಯಿಂಟ್ ಗಳಲ್ಲಿ ತಪಾಸಣೆ ನದೆಸಲಾಗುತ್ತಿದೆ. ನಿಯಮ ಮೀರಿ ಪ್ರವೇಶ ಮಾಡಿದರೆ 500 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ