Latest

ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು

https://mail.google.com/mail/u/0?ui=2&ik=8ea932610f&attid=0.1&permmsgid=msg-a:r-1445863553902208375&th=17b114e61db9890a&view=att&disp=safe&realattid=17b114e46874a255b5f1

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಪೂರ್ಣಪ್ರಮಾಣದ ಮಂತ್ರಿ ಮಂಡಳದ ಮೊದಲ ಸಚಿವ ಸಂಪುಟ ಸಭೆ ಬುಧವಾರ ಸಂಜೆ ನಡೆಯಿತು.

ಸಭೆಯ ನಂತರ ಬೊಮ್ಮಾಯಿ ಪತ್ರಿಕಾಗೋಷ್ಠಿ ನಡೆಸಿ ಸಂಪುಟ ಸಭೆ ನಿರ್ಣಯಗಳ ಮಾಹಿತಿ ನೀಡಿದರು. ಪ್ರಮುಖ ಅಂಶಗಳು ಹೀಗಿವೆ:

Home add -Advt
  1.  ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು  ತೀರ್ಮಾನಿಸಲಾಯಿತು. ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಎಲ್ಲ ಸಚಿವರಿಗೆ ಸೂಚಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.
  2. ಜಿಲ್ಲಾ ಉಸ್ತುವಾರಿಗಳನ್ನು ನಾಳೆ ಸಂಜೆಯಷ್ಟರಲ್ಲಿ ಘೋಷಿಸಲಾಗುವುದು
  3. ಮಂತ್ರಿಗಳಿಗೆ ಖಾತೆಗಳನ್ನು 2 ದಿನದಲ್ಲಿ ನೀಡಲಾಗುವುದು
  4. ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚಿಸಲಾಗುವುದು
  5. ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ ಟಿ ಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಯಿತು.
  6.  ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ಮಾಡಲಾಯಿತು.

ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ

 

Related Articles

Back to top button