ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮನಗರ ಬಳಿಯ ಜಯಪುರ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಜಯಪುರ ಗೇಟ್ ಬಳಿ ಕೆಟ್ಟುನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಮೂವರು ಕೆಳಗೆ ಬಿದ್ದಿದ್ದು, ಬಿದ್ದ ಮೂವರ ಮೇಲೆ ವೇಗವಾಗಿ ಬಂದ ಮತ್ತೊಂದು ಕಾರು ಹರಿದು ಹೋಗಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ