Latest

ಬೆಂಗಳೂರು ಪೊಲೀಸ್ ಕಮೀಷ್ನರ್ ಭಾಸ್ಕರ್ ರಾವ್ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದ್ದು, ಭಾಸ್ಕರ್ ರಾವ್ ಜಾಗಕ್ಕೆ ಕಮಲ್ ಪಂಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕಮಲ್ ಪಂಥ್ 1990ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದಾರೆ.

Home add -Advt

ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂಥ್ ಜಾಗಕ್ಕೆ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂಥ್ ಮತ್ತು ಸುನಿಲ್ ಅಗರ್​ವಾಲ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಕಮಲ್ ಪಂಥ್ ಅವರನ್ನು ನೇಮಕ ಮಾಡಲಾಗಿದೆ.

Related Articles

Back to top button