Latest

ನಾಳೆ ಪ್ರತಿಭಟನೆಗಳಿಗೆ ಅವಕಾಶವಿಲ್ಲ

ಪ್ರತಿಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಯಾವುದೇ ರೀತಿಯ ಪ್ರತಿಭಟನೆಗಳಿಗೆ, ರ್ಯಾಲಿಗಳಿಗೆ ಅವಕಾಶವಿಲ್ಲ. ಈ ವರೆಗೂ ಯಾರೂ ಕೂಡ ಪ್ರತಿಭಟನೆಗಳಿಗೆ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಭೂ ಸುಧಾರಣೆ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ವಿಚಾರವಾಗಿ ಮಾತನಾಡಿದ ಕಮಲ್ ಪಂತ್, ಕೊರೊನಾ ನಿಯಮ ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆಗಳಿಗೆ ಅವಕಾಶವಿಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದರೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದಂತಾಗುತ್ತದೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನೆ ಹೆಸರಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದರೆ, ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರೆ, ಇಲ್ಲವೇ ಆಸ್ತಿ-ಪಾಸ್ತಿಗಳಿಗೆ ಹಾನಿಯುಂಟುಮಾಡಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ವಲಯಕ್ಕೆ ಇಬ್ಬರಂತೆ ಡಿಸಿಪಿಗಳನ್ನು ನಿಯೋಜಿಸಲಾಗುತ್ತದೆ. ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದ ಹಲವರನ್ನು ಈಗಾಗಲೇ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button