Kannada NewsKarnataka News

ರೋಮಾಂಚಕ ಬೈಕ್ ಸಾಹಸ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ನಗರದಲ್ಲಿ ಶನಿವಾರ ರೋಮಾಂಚಕ ಬೈಕ್ ಸಾಹಸ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ನಗರದ ಕೋಟೆ ರಸ್ತೆಯಲ್ಲಿರುವ ಭರತೇಶ್ ಶಾಲೆ ಆವರಣದಲ್ಲಿ ನಡೆದ ಈ ಸಾಹಸ ಪ್ರದರ್ಶನಕ್ಕೆ ನೂರಾರು ಜನರು ಸಾಕ್ಷಿಯಾದರು. ವೃತ್ತಿಪರ ಸಾಹಸಿ ಬೈಕ್ ಚಾಲಕರು ಮೈನವಿರೇಳಿಸುವಂತೆ ಬೈಕ್ ಸಾಹಸ ಮತ್ತು ಟ್ರಿಕ್‌ಗಳನ್ನು ಪ್ರದರ್ಶಿಸಿದರು. ಪ್ರೇಕ್ಷಕರು ಉಸಿರು ಬಿಗಿಹಿಡಿಯುವಂತೆ ಅವರು ಡ್ಯೂಕ್ ಬೈಕ್‌ಗಳಲ್ಲಿ ಸಾಹಸಗಳನ್ನು ಸಾದರಪಡಿಸಿದರು.
ಬೈಕ್ ಸಾಹಸ ನೋಡಲು ಸಾರ್ವಜನಿಕರಿಗೆ ಉಚಿತ ಪ್ರವೇಶವಿತ್ತು.  ಬೈಕ್‌ಗಳು ಚಾಲಕರಿಗೆ ಯಾವ ರೀತಿಯ ರೋಮಾಂಚಕ ಅನುಭವ ನೀಡಬಹುದು ಎನ್ನುವುದನ್ನು ಇಂಥ ಪ್ರದರ್ಶನದ ಮೂಲಕ ಸಾಬೀತುಪಡಿಸಲಾಗುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ವೃತ್ತಿಪರ ಸಾಹಸಿ ಸವಾರರು ಈ ಪ್ರದರ್ಶನ ನೀಡುತ್ತಿದ್ದಾರೆ ಎಂದು ಬಜಾಜ್ ಆಟೋ ಲಿಮಿಟೆಡ್‌ನ ಪ್ರೊಬೈಕಿಂಗ್ ವಿಭಾಗದ ಉಪಾಧ್ಯಕ್ಷ ಸುಮೀತ್ ನಾರಂಗ್ ತಿಳಿಸಿದರು.
ಇದುವರೆಗೆ ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಮಂಗಳೂರು, ತುಮಕೂರು, ಉಡುಪಿ, ಶಿರಸಿ, ವಿಜಯಪುರ, ಕೋಲಾರ, ಚೆನ್ನೈ, ಇಂದೋರ್, ಕಂಚಿಪುರ, ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ  ಸಾಹಸ ಪ್ರದರ್ಶನವನ್ನು ಆಯೋಜಿಸಿದೆ.

Related Articles

Back to top button