

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬೆಂಗಳೂರು-ಪುಣಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮಾಡಲಾಗಿದ್ದು, ರಸ್ತೆಯಲ್ಲಿ ವಾಹನ ಸಂಚಾರ ಆರಂಭವಾಗಿದೆ.
ಬೆಂಗಳೂರು-ಪುಣಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರವಾಡ ಹೈಕೋರ್ಟ್ ಬಳಿ ಅಂಡರ್ ಪಾಸ್ ನಲ್ಲಿ ಗ್ಯಾಸ್ ಟ್ಯಾಂಕರ್ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಇದೀಗ ಗ್ಯಾಸ್ ಟ್ಯಾಂಕರ್ ತೆರವು ಮಾಡಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ