Kannada NewsKarnataka NewsLatestPolitics

*ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರಂಟಿ ಯಾವುದೂ ಇಲ್ಲ; ಮತದಾರರಿಂದ ಕಪಾಳ ಮೋಕ್ಷ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದಿದ್ದಾರೆ.

ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಗುಡುಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button