ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ವಿದೇಶಗಳಲ್ಲಿ ಮತ್ತೆ ಕೋವಿಡ್ ಅಟ್ಟಹಾಸ ಆರಂಭವಾಗಿದ್ದು, ಭಾರತದಲ್ಲಿಯೂ ಮುಂನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಶಾಲಾ-ಕಾಲೇಜು, ವಿಶ್ವ ವಿದ್ಯಾಲಯಗಳಲ್ಲಿ ಮಾಸ್ಕ್, ಬೂಸ್ಟರ್ ಡೋಸ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರದಿಂದ ಗೈಡ್ ಲೈನ್ ಪ್ರಕಟವಾಗುವ ಮೊದಲೇ ಎಚ್ಚೆತ್ತಿರುವ ಖಾಸಗಿ ಶಾಲೆಗಳ ಒಕ್ಕೂಟ, ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮದ ನಿಟ್ತಿನಲ್ಲಿ ಮಕ್ಕಳು, ಶಿಕ್ಷಕರು, ಸಿಬ್ಬಂದಿಗಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿ ಆದೇಶ ಹೊರಡಿಸಿದೆ.
ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುವ ಆತಂಕವಿರುವುದರಿಂದ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ತಿಳಿಸಲಾಗಿದೆ. ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ನೆಗಡಿ, ಕೆಮ್ಮು, ಜ್ವರ ಬಂದರೆ ತಕ್ಷಣ ಕೋವಿಡ್ ಟೆಸ್ಟ್ ಗೆ ಒಳಗಾಗುವಂತೆ ಸೂಚಿಸಿದೆ.
ಈ ನಡುವೆ ಬೆಂಗಳೂರು ವಿಶ್ವ ವಿದ್ಯಾಲಯ ಕೂಡ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿಗಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಎಲ್ಲರೂ ಬೂಸ್ಟರ್ ಡೋಸ್ ಕೂಡ ಪಡೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
*ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದೇನು?*
https://pragati.taskdun.com/karnataka-covidmask-mandatorydr-sudhakarresponse/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ