Latest

ಬೆಂಗಳೂರು ಗಲಭೆ ಪ್ರಕರಣ: ಕಾರ್ಪೊರೇಟರ್ ಪತಿ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ.

ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ. ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್​​ ಬಳಿ ಬಂದಿದ್ದ. ಗಲಾಟೆಗೆ ನೂರಾರು ಜನರನ್ನು ಪ್ರಚೋದಿಸಿ ಎಸ್ಕೇಪ್​ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ

ಇನ್ನು ಬೆಂಗಳೂರು ಗಲಭೆ ಪ್ರಕರಣ ಸಂಬಂಧ ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಈಗಾಗಲೇ ಬಂಧನಕ್ಕೊಳಗಾಗಿರುವ ಆರೋಪಿಗಳಲ್ಲಿ 80 ಆರೋಪಿಗಳನ್ನು ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು. ಈ ವೇಳೆ ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬೆಂಗಳೂರಿನಲ್ಲಿ ಆರೋಪಿಗಳನ್ನು ಇರಿಸಿದರೆ ಮತ್ತೆ ಗಲಾಟೆ ಆಗುವ ಮಾಹಿತಿ ಹಿನ್ನೆಲೆಯಲ್ಲಿ ಒಟ್ಟು 80 ಆರೋಪಿಗಳನ್ನು ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button