
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಆರೋಪಿ, ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ನವೀನ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್‌ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಆರೋಪಿ ನವೀನ್, ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇದು ಮುಸ್ಲೀಂ ಸಮುದಾಯದವರನ್ನು ಕೆರಳಿಸಿತ್ತು. ಇದರಿಂದ ರೊಚ್ಚಿಗೆದ್ದ ಹಲವರು ಶಾಸಕರ ಮನೆಗೆ ಬೆಂಕಿಹಚ್ಚಿದ್ದಲ್ಲದೇ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣೆಯನ್ನೂ ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ