
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಬೆಂಗಳೂರು ಗಲಭೆ ಪ್ರಕರಣದಲ್ಲಿ ಎಸ್ ಡಿಪಿಐ ಪಾತ್ರವಿದೆ. ಈ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಬಿಜೆಪಿ ಕಚೇರಿ ನೂತನ ಕಟ್ಟಡ ಶಿಲಾನ್ಯಾಸದ ವೇಳೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ನಿಷೇಧಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದರು.
ರಾಜ್ಯದಲ್ಲೂ ಯುಪಿ ಮಾದರಿ ಕಾನೂನು ಜಾರಿಗೆ ತರಲು ಚಿಂತನೆ ನದೆಸಲಾಗಿದೆ. ಯಾರು ಬಂದ್ ಕರೆ ನೀಡುತ್ತಾರೋ, ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟವುಂಟುಮಾಡುತ್ತಾರೋ ಅವರ ಕೈಯಲ್ಲಿಯೆ ನಷ್ಟ ಭರಿಸಬೇಕು ಎಂಬ ಬಗ್ಗೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೂಡ ಆದೇಶ ನೀಡಿದೆ. ಇದೇ ಮಾದರಿಯಲ್ಲಿ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯಲ್ಲಿ ಆಗಿರುವ ನಷ್ಟವನ್ನು ಸಂಬಂಧಿಸಿದವರಿಂದಲೇ ಭರಿಸಬೇಕಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ