
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾ, ಗುಜರಾತ್ ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈಗಾಗಲೇ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಹಲವು ಹಳ್ಳಿಗಳು ಜಲಾವೃತಗೊಂಡಿವೆ.
ಉತರ ಒಳನಾಡು ಜಿಲ್ಲೆಗಳಾದ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಂಕಣ ಗೋವಾ, ಕರಾವಳಿ ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ ಮುಂದಿನ ಐದು ದಿನಗಳ ಕಾಲ ಅತ್ಯಧಿಕ ಮಳೆಯಾಗಲಿದ್ದು, ಗುಜರಾತ್ ನಲ್ಲಿಯೂ ಜೂನ್ 26ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತೊಂದು ಭೀಕರ ಅಪಘಾತ; 10 ಯಾತ್ರಾರ್ಥಿಗಳ ದುರ್ಮರಣ