ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರು ನಗರ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದು, ಇಂದು ಒಂದೇ ದಿನ 15 ಪೊಲೀಸ್ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ. ಎಎಸ್ಐ ಓರ್ವರು ಮಹಾಮಾರಿಗೆ ಬಲಿಯಾಗಿದ್ದಾರೆ.
ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಇದುವರೆಗೆ 9 ಮಂದಿ ಪೊಲೀಸರಿಗೆ ಪಾಸಿಟಿವ್ ಬಂದಿತ್ತು. ಇಂದು ಮತ್ತೆ 15 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದೇ ಠಾಣೆಯಲ್ಲಿ 24 ಜನ ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. ಓರ್ವ ಸಬ್ ಇನ್ಸ್‌ಪೆಕ್ಟರ್, ಇಬ್ಬರು ಎಎಸ್ಐಗಳು ಮತ್ತು ಹಲವು ಕಾನ್ಸ್‌ಟೇಬಲ್ ಗಳು ಸೋಂಕಿಗೆ ಗುರಿಯಾಗಿದ್ದಾರೆ.
ಶುಕ್ರವಾರ ಕೊರೊನಾ ಪಾಸಿಟಿವ್ ಬಂದಿದ್ದ ವಿಲ್ಸನ್ ಗಾರ್ಡನ್ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಐ ಇಂದು ಮೃತಪಟ್ಟಿದ್ದಾರೆ. ಒಟ್ಟಾರೆ ಬೆಂಗಳೂರು ನಗರ ಪೊಲೀಸರಲ್ಲಿ ದಿನೇ ದಿನೇ ಸೋಂಕು ಅಧಿಕವಾಗುತ್ತಿದ್ದು ಖಾಕಿ ಪಡೆಯಲ್ಲಿ ಆತಂಕ ಹೆಚ್ಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ