
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ 19 ವರ್ಷದ ಯುವಕನೊಬ್ಬ ಬಲಿಯಾಗಿದ್ದು, ಬೆಂಗಳೂರಿಗರನ್ನು ಇನ್ನಷ್ಟು ಆತಂಕಕ್ಕೆ ದೂಡಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನನ್ನು ಕೆ ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ಎಂದು ವೈದ್ಯಕೀಯ ಮೂಲದಿಂದ ತಿಳಿದುಬಂದಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವಕ ಮೃತಪಟ್ಟಿದ್ದಾನೆ.
ಪೋಷಕರು ಹೇಳುವ ಪ್ರಕಾರ ಯುವಕ ನ್ಯುಮೋನಿಯಾದಿಂದ ಬಳಲುತ್ತಿದ್ದ. ಆದರೆ ಆಸ್ಪತ್ರೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ಮಗನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ