Latest

ಸಂಪಾದಕ ಶಂಕರ್ ಪೊಲೀಸರ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರುನ ಬ್ಯಾಡರಹಳ್ಳಿ ಐಷಾರಾಮಿ ನಿವಾಸದಲ್ಲಿ ಸ್ಥಳೀಯ ಪತ್ರಿಕೆ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಶಂಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದ ಅಡಿಯಲ್ಲಿ ಶಂಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕರ್ ಮಗಳು ಸಿಂಧೂರಾಣಿ ಪತಿ ಶ್ರೀನಾಥ್ ನನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ’ಶಾಕರ ಪತ್ರಿಕೆ’ ಸಂಪಾದಕ ಶಂಕರ್ ಅವರ ಮನೆಯಲ್ಲಿ ಅವರ ಪತ್ನಿ ಭಾರತಿ, ಹೆಣ್ಣು ಮಕ್ಕಳಾದ ಸಿಂಚನಾ, ಸಿಂಧೂರಾಣಿ ಹಾಗೂ ಮಗ ಮಧುಸಾಗರ್ ಆತ್ಮಹತ್ಯೆಗೆ ಶರಣಾಗಿದ್ದರು. ಸಿಂಧೂರಾಣಿ ತನ್ನ 9 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಸಾಯಿಸಿದ್ದರು.

ಐವರು ಸಾವು ಪ್ರಕರಣದ ಬೆನ್ನಲ್ಲೇ ಮೂವರು ಮಕ್ಕಳು ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿತ್ತು. ಅದರಲ್ಲಿ ಮಗ ಮಧುಸಾಗರ್ ತಂದೆ ಶಂಕರ್ ವಿರುದ್ಧ ಅಕ್ರಮ ಸಂಬಂಧಗಳ ಬಗ್ಗೆ ಆರೋಪಿಸಿದ್ದ. ಅಲ್ಲದೇ ಮೊಬೈಲ್ ಹಾಗೂ ಲಾಪ್ ಟಾಪ್ ಗಳಲ್ಲಿಯೂ ಶಂಕರ್ ಶಂಕರ್ ಅವರ ಹಲವು ವಿಚಾರಗಳು ಪೊಲೀಸರಿಗೆ ಲಭ್ಯವಾಗಿತ್ತು. ಈಗಾಗಲೇ ಎರಡು ಬಾರಿ ಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಇದೀಗ ಶಂಕರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಮಗು ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button