Latest

6 ಕೆಜಿ ಚಿನ್ನಾಭರಣ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಕೆ.ಆರ್.ಮಾರುಕಟ್ಟೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಹೋಂಡಾ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಬೈಕ್ ಪರಿಶೀಲಿಸಿದಾಗ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ಚಿನ್ನಾಭರಣಗಳನ್ನು ಜಪ್ತಿ ಮಾಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಬಳಿಯಿಂದ ಬರೋಬ್ಬರಿ 6 ಕೆಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿದ್ದು, ಯಾವುದೇ ಸೂಕ್ತ ದಾಖಲೆಗಳೂ ಇರಲಿಲ್ಲ. ಬೆಂಗಳೂರಿನ ವಿವಿಧ ಚಿನ್ನದ ಅಂಗಡಿಗಳಿಗೆ ಪೂರೈಸಲು ತೆಗೆದುಕೊಂಡು ಹೋಗಲಾಗುತ್ತಿತ್ತು ಎನ್ನಲಾಗಿದೆ.

Related Articles

Back to top button