ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ನಡುವೆ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಲಸಿಕೆ ಪಡೆದ 78 ಜನರಿಗೆ ಸೋಂಕು ದೃಢಪಟ್ಟಿದೆ.
ವ್ಯಾಕ್ಸಿನ್ ಪಡೆದಿದ್ದರೂ ಕೂಡ ಬೆಂಗಳೂರಿನಲ್ಲಿ 78 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಚ್ಚರಿ ವಿಚಾರವೆಂದರೆ 2 ಡೋಸ್ ಲಸಿಕೆ ಪಡೆದ 13 ಜನರಿಗೆ ಕೊರೊನಾ ದೃಢಪಟ್ಟಿದೆ. 13 ಜನರಲ್ಲಿ 9 ಜನರು ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ವರಿಗೆ ಆಕ್ಸಿಜನ್ ಬೆಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಸಾಲು ಸಾಲು ಹಬ್ಬಗಳ ನಡುವೆಯೇ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಹಬ್ಬಗಳಲ್ಲಿ ಮಾರುಕಟ್ಟೆ ಬಂದ್ ಮಾಡಲು ಪಾಲಿಕೆ ಚಿಂತನೆ ನಡೆಸಿದೆ. ಮಾರುಕಟ್ಟೆಗಳಲ್ಲಿ ಕೋವಿಡ್ ರ್ಯಾಂದಮ್ ಟೆಸ್ಟ್ ಹಾಗೂ ಅಪಾರ್ಟ್ ಮೆಂಟಗಳಲ್ಲಿ ಕೋವಿಡ್ ಟೆಸ್ಟ್ ನಡೆಸಲು ಮುಂದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ