Latest

ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟ; ವ್ಯಕ್ತಿ ಸಜೀವದಹನ; ಮನೆಯಿಂದ ಹೊರಬರಲಾಗದೇ ಹಲವರ ಪರದಾಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಜೀವದಹನಗೊಂಡಿರುವ ಘಟನೆ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ.

ಇಲ್ಲಿನ ಆಶ್ರಿತ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಈ ದುರಂತ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವ್ಯಕ್ತಿ ಸಜೀವದಹನಗೊಂಡಿದ್ದಾರೆ. ಮನೆಯಿಂದ ಹೊರಬರಲಾಗದೇ ಇಬ್ಬರು ಮಹಿಳೆಯರು ರಕ್ಷಣೆಗಾಗಿ ಪರದಾಡುತ್ತಿದ್ದಾರೆ. ಮೂರು ಫ್ಲ್ಯಾಟ್ ಗಳು ಸುಟ್ಟು ಕರಕಲಾಗಿದ್ದು, ಮೂವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಮನೆಯಲ್ಲಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ರಿಜಿಸ್ಟರ್ ಮ್ಯಾರೇಜ್; ಡಿಸಿ ಕಚೇರಿ ಮೆಟ್ಟಿಲೇರಿದ ಪತ್ನಿ

Home add -Advt

Related Articles

Back to top button