ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ನಡೆದುದ್ದ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಿಗೆ ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಮಹಿಳಾ ಅಪರಾಧಿ ತಾನಿಯಾ ಖಾನಂಗೆ 20 ವರ್ಷ ಜೈಲು ಶಿಕ್ಷೆ, ಅಪರಾಧಿ ಜಮಾಲ್ ಗೆ 5 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಳೆದ ವರ್ಷ ಮೇ 18ರಂದು ಈ ಪ್ರಕರಣ ಬೆಳಕಿಗೆ ಬಂದಿತ್ತು. ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಪ್ರಕರಣದ ಎಲ್ಲ ಆರೋಪಿಗಳು ಬೆಂಗಳೂರಿನ ರಾಮಮೂರ್ತಿ ನಗರದ ಎನ್ ಆರ್ ಕಾಲೋನಿಯಲ್ಲಿ ವಾಸವಾಗಿದ್ದರು. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಸ್ನೇಹಿತರ ಮಧ್ಯೆಯೇ ಹಣದ ವಿಚಾರವಾಗಿ ಜಗಳ ಆರಂಭವಾಗಿ ತಮ್ಮದೇ ಗ್ಯಾಂಗ್ ನ ಯುವತಿ ಮೇಲೆ ಹಲ್ಲೆ ನಡೆಸಿ ಗ್ಯಾಂಗ್ ರೇಪ್ ನಡೆಸಿದ್ದರಲ್ಲದೇ ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ವಿಡಿಯೋ ವೈರಲ್ ಮಾಡಿದ್ದರು.
ಪ್ರಕರಣದ 7 ಆರೋಪಿಗಳ ಅಪರಾಧ ಸಾಬೀತಾಗಿದ್ದು, ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶ ಎನ್ ಸುಬ್ರಮಣ್ಯ 7 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ದಿಶಾ ಕೇಸ್: ಆರೋಪಿಗಳ ಎನ್ ಕೌಂಟರ್ ಫೇಕ್ ಎನ್ ಕೌಂಟರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ