ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಹೊರವರ್ತುಲದಲ್ಲಿ ನಡೆದಿದೆ.
ಶ್ರೀದೇವಿ (21) ಹಾಗೂ ಒಂದು ವರ್ಷದ ಮಗು ದೀಕ್ಷಿತ್ ಮೃತ ದುರ್ದೈವಿಗಳು. ಕೆ.ಆರ್.ಪುರದಿಂದ ತಮಿಳುನಾಡಿನ ಧರ್ಮಪುರಿಗೆ ಪತಿ-ಪತ್ನಿ ಹಾಗೂ ಮಗು ಬುಲೆಟ್ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರತ್ತಹಳ್ಳಿ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿಹೊಡೆದು ಈ ದುರಂತ ಸಂಭವಿಸಿದೆ.
ಪತಿ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್.ಎ.ಎಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾತಿ ವಿಭಜಕ ಸಿದ್ದರಾಮಯ್ಯ; ವಿಪಕ್ಷ ನಾಯಕನ ವಿರುದ್ಧ ಬಿಜೆಪಿ ಕಿಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ