Latest

ಬ್ಲ್ಯಾಕ್ ಫಂಗಸ್ ಗೆ ಮತ್ತಿಬ್ಬರು ಬಲಿ; ಕೋಲಾರದಲ್ಲಿ 12 ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮಹಾಮಾರಿಯಿಂದ ತತ್ತರಿಸುತ್ತಿರುವ ರಾಜ್ಯಕ್ಕೆ ಇದೀಗ ಬ್ಲ್ಯಾಕ್ ಫಂಗಸ್ ಆತಂಕ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಇಬ್ಬರು ಬ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆಯ ನಿವಾಸಿ 64 ವರ್ಷದ ವೃದ್ಧ ಹಾಗೂ ಕೊಟಾಲಂ ನಿವಾಸಿ 54 ವರ್ಷದ ಮಹಿಳೆ ಈ ಕಪ್ಪು ಶಿಲೀಂಧ್ರ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ 30ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಕೋಲಾರದಲ್ಲಿ 12 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, 7 ಜನರನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ನಡುವೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ರಾಜ್ಯದಲ್ಲಿ ಔಷಧಿ ಅಬಾವ ಆರಂಭಗಾದೆ.

ಕೊರೊನಾದಿಂದ ಗುಣಮುಖರಾದವರಲ್ಲಿ ಅತಿಯಾದ ಸ್ಟಿರಾಯ್ಡ್ ಹಾಗೂ ರೆಮ್ ಡಿಸಿವಿರ್ ಬಳಕೆಯಿಂದ ರೋಗನಿರೋಧಕ ಶಕ್ತಿ ಕಡಿಮೆಯಾದವರಲ್ಲಿ ಈ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿದೆ ಎನ್ನಲಾಗಿದೆ.
ಫೈನಾನ್ಸಿಯಲ್ ಎಕ್ಸ್ ಪ್ರೆಸ್ ಸಂಪಾದಕ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button